ಇನ್ಮುಂದೆ ಯಾವುದೇ ಒಡಕು ನಮ್ಮ ಮಧ್ಯೆ ಬರಲ್ಲ ಎಂದು ಸಭೆ ಬಳಿಕ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಬಿಜೆಪಿ ಒಬಿಸಿ ಮೋರ್ಚಾದ ಹೊಣೆ ನೀಡಿದ್ದಕ್ಕೆ ಸಂತಸವಾಗಿದೆ.
ನವದೆಹಲಿ(ಜ.27): ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಎಸ್ವೈ- ಈಶ್ವರಪ್ಪ ಒಂದುಗೂಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಒಬಿಸಿ ಮೋರ್ಚಾದ ಹೊಣೆಯನ್ನು ಈಶ್ವರಪ್ಪ ಹೆಗಲಿಗೆ ವಹಿಸಲಾಗಿದೆ.
ನಾನು ಈಶ್ವರಪ್ಪನವರು ನಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದೇವೆ. ಈಶ್ವರಪ್ಪ ಜೊತೆಗೆ ಒಟ್ಟಾಗಿ ಕೆಲಸ ಮಾಡಲು ತಿಳಿಸಿದ್ದಾರೆ ಇನ್ಮುಂದೆ ಯಾವುದೇ ಒಡಕು ನಮ್ಮ ಮಧ್ಯೆ ಬರಲ್ಲ ಎಂದು ಸಭೆ ಬಳಿಕ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಒಬಿಸಿ ಮೋರ್ಚಾದ ಹೊಣೆ ನೀಡಿದ್ದಕ್ಕೆ ಸಂತಸವಾಗಿದೆ. ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಆಗಲಿದ್ದಾರೆ ಎಂದು ಸಭೆ ಬಳಿಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತಗೊಳಿಸಲು ಬಿಜೆಪಿ ಸಿದ್ಧವಾಗಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಮುಕ್ತ ಮಾಡಲು ನಿರ್ಧರಿಸಲಾಗಿದೆ. ಇನ್ನು ಮುಂದೆ ರಾಯಣ್ಣ ಬ್ರಿಗೇಡ್ ಸಭೆಯಲ್ಲಿ ಈಶ್ವರಪ್ಪ ಭಾಗವಹಿಸಲ್ಲ ಎಂದು ಸಂಧಾನ ಸಭೆಯ ನಂತರ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರರಾವ್ ತಿಳಿಸಿದ್ದಾರೆ.
