ಸಚಿವ ಶಿವಕುಮಾರ್ ಅವರು ಸುಪ್ರೀಂಕೋರ್ಟ್ ಆದೇಶದಂತೆ ದಂಡ ಕಟ್ಟಲಾಗಿದೆ ಎಂದಿರುವುದು ಸತ್ಯಕ್ಕೆ ದೂರವಾದದ್ದು. ಅದು ಅಪ್ಪಟ ಸುಳ್ಳು ಎಂದು ಹೇಳಿದರು.
ಬೆಂಗಳೂರು(ಅ.23): ಕಲ್ಲದ್ದಲು ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಸುಳ್ಳನ್ನು ಸತ್ಯವನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಖಾಸಗಿ ಕಂಪನಿಯೇ ದಂಡ ಭರಿಸಬೇಕು ಎಂದಿದ್ದರೂ ಕೆಪಿಸಿಎಲ್ (ಕರ್ನಾಟಕ ವಿದ್ಯುತ್ ನಿಗಮ) ದಂಡ ಭರಿಸಿದೆ. ಆದರೂ ಸಚಿವ ಶಿವಕುಮಾರ್ ಅವರು ಸುಪ್ರೀಂಕೋರ್ಟ್ ಆದೇಶದಂತೆ ದಂಡ ಕಟ್ಟಲಾಗಿದೆ ಎಂದಿರುವುದು ಸತ್ಯಕ್ಕೆ ದೂರವಾದದ್ದು. ಅದು ಅಪ್ಪಟ ಸುಳ್ಳು ಎಂದು ಹೇಳಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇದರಲ್ಲಿ ಭ್ರಷ್ಟಾಚಾರ ನಡೆದಿರುವುದು ಸತ್ಯ ಎಂದು ಯಡಿಯೂರಪ್ಪ ಸ್ಪಷ್ಟವಾಗಿ ತಿಳಿಸಿದರು.

