ಯಡಿಯೂರಪ್ಪ ಹರಕುಲು ಸೀರೆ, ಮುರಿದ ಬೈಸಿಕಲ್ ನನ್ನ ಸಾಧನೆ ಎಂದೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  ಯಾವುದಾದರೂ ಒಂದು ಜಿಲ್ಲೆಯಲ್ಲಿ ಕಳಪೆ ಸೀರೆ ನೀಡಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಗಂಗಾವತಿಯಲ್ಲಿ ಪರಿವರ್ತನಾ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಸಿಎಂಗೆ ಸವಾಲು ಹಾಕಿದ್ದಾರೆ.

ಬೆಂಗಳೂರು (ಡಿ.16): ಯಡಿಯೂರಪ್ಪ ಹರಕುಲು ಸೀರೆ, ಮುರಿದ ಬೈಸಿಕಲ್ ನನ್ನ ಸಾಧನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಾವುದಾದರೂ ಒಂದು ಜಿಲ್ಲೆಯಲ್ಲಿ ಕಳಪೆ ಸೀರೆ ನೀಡಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಗಂಗಾವತಿಯಲ್ಲಿ ಪರಿವರ್ತನಾ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಿಎಂಗೆ ಸವಾಲು ಹಾಕಿದ್ದಾರೆ.

ಹಳ್ಳಿಯ ಬಡ ಮಕ್ಕಳಿಗೆ ಸೈಕಲ್ ನೀಡಿದ್ದೇನೆ. ಇದರ ಬಗ್ಗೆ ಹಗುರವಾಗಿ ಮಾತನಾಡುವ ನಿಮ್ಮದು ಎಲುಬು ಇಲ್ಲದ ನಾಲಿಗೆ ಎಂದು ವಾಗ್ದಾಳಿ ನಡೆಸಿದ್ದಾರೆ. ನಾನು ಜೈಲಿಗೆ ಹೋಗಿ ಬಂದವನು ಎಂದು ಸಿದ್ದರಾಮಯ್ಯ ಹೇಳ್ತಾರೆ. ನೀವೊಬ್ಬ ವಕೀಲರು, ಬಾಯಿಗೆ ಬಂದಂತೆ ಮಾತಾಡುತ್ತೀರಾ? ನಿಮಗೆ ನಾಚಿಕೆ ಆಗಬೇಕು ಎಂದು ಯಡಿಯೂರಪ್ಪ ಕಿಡಿ ಕಾರಿದ್ದಾರೆ.