ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ತೆರವು ಮಾಡಲು ಆರ್ ಎಸ್ ಎಸ್ ಸಲಹೆ ನೀಡಿದ್ದ ಬೆನ್ನಲ್ಲೇ ಇದೀಗ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವುದು ಉತ್ತಮ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

ಬೆಂಗಳೂರು : ಮುಂದಿನ ಲೋಸಭೆ ಚುನಾವಣೆವರೆಗೆ ಪಕ್ಷದ ರಾಜ್ಯಾಧ್ಯಕ್ಷರಾಗಿ ಬಿ.ಎಸ್‌.ಯಡಿಯೂರಪ್ಪ ಅವರೇ ಮುಂದುವರಿಯುವುದು ಉತ್ತಮ ಎಂದು ರಾಜ್ಯಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ವರ್ಷ ಲೋಕಸಭೆ ಚುನಾವಣೆ ಎದುರಾಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈಗಾಗಲೇ ರಾಜ್ಯದಲ್ಲಿ ಪ್ರವಾಸ ಕೈಗೊಂಡು ಪಕ್ಷವನ್ನು ಬಲಗೊಳಿಸುವಲ್ಲಿ ಯಡಿಯೂರಪ್ಪ ಸಾಕಾಷ್ಟುಶ್ರಮಿಸಿದ್ದಾರೆ, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರೇ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವುದು ಉತ್ತಮ ಎಂದು ಹೇಳಿದರು.