ಬೆಂಗಳೂರು [ಜು.28]: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಯಡಿಯೂರಪ್ಪ ಅವರು ಮೋದಿಯಷ್ಟೇ ಪವರ್ ಫುಲ್ ಎಂದು ಕಾಂಗ್ರೆಸ್ ಮುಖಂಡರೋರ್ವರು ಹೇಳಿದ್ದಾರೆ. 

ತುಮಕೂರಿನಲ್ಲಿ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೇಂದ್ರದಲ್ಲಿ ಹೇಗೆ ಮೋದಿ ಪ್ರಭಾವ ಇದೆಯೋ ಕರ್ನಾಟಕದಲ್ಲಿ ಯಡಿಯೂರಪ್ಪರ ಪ್ರಭಾವ ಅಷ್ಟೇ ಇದೆ ಎಂದರು.

ಯಡಿಯೂರಪ್ಪನವರಿಗೆ ವಯಸ್ಸಾಗಿರಬಹುದು. ಆದರೂ ಅವರಿಗೆ ಸಾಧಿಸುವ ವಿಲ್ ಪವರ್ ಇದೆ.  ಉತ್ಸಾಹ ಇದೆ. ಅವರು ಈಗ ಅಧಿಕಾರಕ್ಕೆ ಬಂದಿದ್ದಾರೆ. ಹಿಂದಿನ ಸರ್ಕಾರ ಕೊಡದಿದ್ದ ವೃದ್ದಾಪ್ಯ ವೇತನ, ಅಂಗವಿಕಲರ ವೇತನ ಶೀಘ್ರ ಬಿಡುಗಡೆ ಮಾಡಲಿ ಎಂದು ರಾಜಣ್ಣ ಹೇಳಿದರು.

ರಾಜೀನಾಮೆ ನೀಡಿದ 14 ಅತೃಪ್ತ ಶಾಸಕರು ಅನರ್ಹ: ಸ್ಪೀಕರ್ ನಿರ್ಧಾರ

ರೈತರ ಸಾಲ ಮನ್ನಾದ ಹಣವನ್ನೂ ಜರೂರು ಬಿಡುಗಡೆ ಮಾಡಲಿ ಎಂದು ಕಾಂಗ್ರೆಸ್ ನಾಯಕ ರಾಜಣ್ಣ ಆಗ್ರಹಿಸಿದರು. ನಾನು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನಾಗಿ ಯಡಿಯೂರಪ್ಪರ ಪ್ರಮಾಣ ವಚನಕ್ಕೆ ಹೋಗಿದ್ದೆ. ಅದನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ತುಮಕೂರಿನಲ್ಲಿ ಕೆ.ಎನ್.ರಾಜಣ್ಣ ಹೇಳಿದರು.