ಬೆಂಗಳೂರು(ಅ.21): ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಬೃಹತ್ ಕಲ್ಲಿದ್ದಲು ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಬಿಎಸ್'ವೈ ಆರೋಪಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ 'ಕಳೆದ 30 ವರ್ಷಗಳಲ್ಲೇ ಕೇಳರಿಯದಷ್ಟು ಹಗರಣಗಳು ನಡೆದಿವೆ. ರಾಜ್ಯದಲ್ಲಿ ಸರ್ಕಾರದ ಖಜಾನೆಯನ್ನು ಲೂಡಿ ಮಾಡುತ್ತಿದ್ದಾರೆ. KPCL ಅಧ್ಯಕ್ಷರಾಗಿ ಹನ್ನೊಂದು ಬಾರಿ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ 418 ಕೋಟಿ ರೂಪಾಯಿ ಹಣವನ್ನು ಲೂಟಿ ಹೊಡೆದಿದ್ದಾರೆ' ಎಂದು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.