ಬಿ.ಎಸ್ ಯಡಿಯೂರಪ್ಪ ಅವರ ಅಪ್ಪನಾಣೆಗೂ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿಯ ಬೈಂದೂರಿನಲ್ಲಿ ಹೇಳಿದ್ದಾರೆ.
ಉಡುಪಿ (ಜ.08) : ಬಿ.ಎಸ್ ಯಡಿಯೂರಪ್ಪ ಅವರ ಅಪ್ಪನಾಣೆಗೂ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿಯ ಬೈಂದೂರಿನಲ್ಲಿ ಹೇಳಿದ್ದಾರೆ.
ಇನ್ನು ಜೆಡಿಎಸ್ ಮುಖಂಡ ಕುಮಾರಸ್ವಾಮಿಯೂ ಕೂಡ ಮುಖ್ಯಮಂತ್ರಿಯಾಗುವ ಕನಸನ್ನು ಬಿಟ್ಟು ಬಿಡಲಿ ಎಂದಿದ್ದಾರೆ.
ಅಲ್ಲದೇ ಇದೇ ವೇಳೆ ಫೆಬ್ರವರಿಯಲ್ಲಿ ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸುತ್ತೇನೆ ಎಂದು ಕೂಡ ತಿಳಿಸಿದರು.
2025ರ ವಿಷನ್ ಮುನ್ನೋಟ ತಯಾರು ಮಾಡಿದ್ದೇವೆ. ವೀರಪ್ಪ ಮೋಯ್ಲಿ ಅವರು ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿರಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
