ಬೆಂಗಳೂರು [ಜು.26]:   ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಬಿಗಿ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿದೆ. 

ಸಂಜೆ 6.15ರ ಸುಮಾರಿಗೆ ರಾಜಭವನದಲ್ಲಿ BSY ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಸುತ್ತಮುತ್ತಲ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿ ನಿಯೋಜಿಸಲಾಗುತ್ತಿದೆ.

ಈ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಟ್ರಾಫಿಕ್, ಲಾ & ಆರ್ಡರ್ ಎಲ್ಲಾ ಸಿಬ್ಬಂದಿ ಜೊತೆ ಮೀಟಿಂಗ್ ಮಾಡಿದ್ದು, ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಸೂಚಿಸಿದ್ದಾರೆ. 

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಮತ್ತೆ ಸರ್ಕಾರ ರಚನೆಯ ಅವಕಾಶ?

ಇಬ್ಬರು ಹೆಚ್ಚವರಿ ಪೊಲೀಸ್ ಆಯುಕ್ತರು, ಒಬ್ಬರು ಟ್ರಾಫಿಕ್ ಹೆಚ್ಚವರಿ ಪೊಲೀಸ್ ಆಯುಕ್ತರ ನೇಮಕದೊಂದಿಗೆ, 6 ಜನ ಡಿಸಿಪಿಗಳು, 15 ಎಸಿಪಿಗಳು, 1000 ಸಿಬ್ಬಂದಿಗಳ ನಿಯೋಜನೆ ಮಾಡಲಾಗುವುದು ಎಂದು ಅಲೋಕ್ ಕುಮಾರ್ ತಿಳಿಸಿದರು.

ಅಗತ್ಯ ಬಿದ್ದರೆ ಇನ್ನೂ ಹೆಚ್ಚಿನ ಭದ್ರತೆ ಒದಗಿಸಲಾಗುವುದು. 3000 ಪಾಸ್ ನೀಡಲು ತಿಳಿಸಿದ್ದು, ಇದಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆ ಇದ್ದು,  LED ಸ್ಕ್ರೀನ್ ಅಳವಡಿಸಲಾಗುತ್ತದೆ ಎಂದರು. 

"