ಮಹದಾಯಿ ಹೋರಾಟಗಾರರಿಗೆ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳ ಮನೆ ಮುಂದೆ ಪ್ರತಿಭಟನೆ ನಡೆಸಿ ಎಂದು ಹೇಳಿದ್ದಾರೆ.
ಬೆಂಗಳೂರು(ಡಿ.24): ಬೆಂಗಳೂರಿನ ಬಿಜೆಪಿ ಕಚೇರಿ ಎದುರು ಮಹದಾಯಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದು, ಯಡಿಯೂರಪ್ಪ ಅವರು ಸ್ಥಳಕ್ಕೆ ಆಗಮಿಸುವವರೆಗೂ ಕೂಡ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳ ಮನೆ ಮುಂದೆ ಪ್ರತಿಭಟನೆ ನಡೆಸಿ ಎಂದು ಹೇಳಿದ್ದಾರೆ.
ಸದ್ಯ ಹಾವೇರಿಯಲ್ಲಿ ಇರುವ ಬಿಎಸ್’ವೈ ಮಹಾದಾಯಿ ಹೋರಾಟಗಾರರಿಗೆ ಈ ಬಗ್ಗೆ ತಾಕೀತು ಮಾಡಿದ್ದಾರೆ.
ಹೋರಾಟಗಾರರು ಬಿಜೆಪಿಯನ್ನು ಕಚೇರಿಯಲ್ಲಿರುವ ಸ್ಥಳವನ್ನು ಬಿಟ್ಟು ತೆರಳುವಂತೆ ಹೇಳಿದ್ದಾರೆ. ಆದರೆ ಯಡಿಯೂರಪ್ಪ ಹೇಳಿಕೆಗೆ ಪ್ರತಿಭಟನಾಕಾರರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
