ಬೆಂಗಳೂರು(ಅ.2): ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶದ ನಂತರ ಬಿಜೆಪಿ ಹಿರಿಯ ಮುಖಂಡ ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಶಾಕ್ ಕೊಟ್ಟಿದ್ದಾರೆ. ಈಶ್ವರಪ್ಪ ಅವರ ಆಪ್ತರಾದ ಎನ್.ಎಸ್. ವಿನಯ್ ಅವರನ್ನು ಬಿಜೆಪಿ ರಾಜ್ಯ ಮಾಧ್ಯಮ ಸಹ ಸಂಚಾಲಕ ಸ್ಥಾನದಿಂದ ಬದಲಾವಣೆ ಮಾಡಲಾಗಿದೆ.

ವಿನಯ್ ಅವರು ರಾಜ್ಯ ಮಾಧ್ಯಮ ಸಹ ಸಂಚಾಲಕರಾಗಿದ್ದರು. ಬೆಳಗಾವಿಯಲ್ಲಿ ನಾಳೆ ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಣಿಗೆ ಬಾರದಂತೆ ಸೂಚನೆ ನೀಡಲಾಗಿದೆ. ಹಾವೇರಿಯಲ್ಲಿ ನಡೆದ ಹಿಂದ ಸಮಾವೇಶದಲ್ಲಿ ಈಶ್ವರಪ್ಪ ಪರವಾಗಿ ವಿನಯ್ ಕೆಲಸ ಮಾಡಿದ್ದರು. ಈ ಹಿನ್ನಲೆಯಲ್ಲಿ ಈಶ್ವರಪ್ಪ ಆಪ್ತರ ಮೇಲೆ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ ಎನ್ನಲಾಗಿದೆ.