ಬೆಂಗಳೂರು (ಸೆ.18): ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಹಿರಿಯ ಐಎಎಸ್ ಅಧಿಕಾರಿ ರತ್ನಪ್ರಭಾ ಅವರನ್ನೇ ಮುಂದಿನ ಮುಖ್ಯಕಾರ್ಯದರ್ಶಿಯಾಗಿ ನೇಮಿಸಬೇಕು ಎಂದು ಒತ್ತಾಯಿಸಿದ್ದಾರೆ.
ರತ್ನಪ್ರಭ ಅವರಿಗೆ ಮುಖ್ಯ ಕಾರ್ಯದರ್ಶಿಯಾಗುವ ಎಲ್ಲ ಅರ್ಹತೆ ಇದೆಮ ಅವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಿಸದಿದ್ದರೆ ದಲಿತ ಮಹಿಳೆಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಆದುದರಿಂದ ರತ್ನಪ್ರಭ ಅವರನ್ನೇ ಮುಂದಿನ ಮುಖ್ಯಕಾರ್ಯದರ್ಶಿಯನ್ನಾಗಿ ಮಾಡಬೇಕು ಎಂದು ನನ್ನ ವಿನಂತಿ ಎಂದು ಯಡಿಯೂರಪ್ಪ ಹೇಳಿದ್ದಾರೆ.
