ಮೃತ ರೈತನ ಕುಟುಂಬಕ್ಕೆ ಒಂದು ಲಕ್ಷ ರೂ. ಪರಿಹಾರ ನೀಡುವ ಮೂಲಕ ಯಡಿಯೂರಪ್ಪ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
ಗುಂಡ್ಲುಪೇಟೆ (ಏ.08): ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ನಾಳೆ ಉಪಚುನಾವಣೆ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ವಡ್ಡರ ಹೊಸಹಳ್ಳಿ ಗ್ರಾಮದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ನಿವಾಸಕ್ಕೆ ಯಡಿಯೂರಪ್ಪ ಭೇಟಿ ನೀಡಿದ್ದಾರೆ.
ಆ ಸಂದರ್ಭದಲ್ಲಿ ಮೃತ ರೈತನ ಕುಟುಂಬಕ್ಕೆ ಒಂದು ಲಕ್ಷ ರೂ. ಪರಿಹಾರ ನೀಡುವ ಮೂಲಕ ಯಡಿಯೂರಪ್ಪ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
