ನೋಟು ನಿಷೇಧ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಆರ್ಥಿಕತೆಯನ್ನು ಪುನರುತ್ತೇಜಿಸಲು ಕಾರ್ಪೋರೇಟ್ ತೆರಿಗೆ ಹಾಗೂ ವೈಯಕ್ತಿಕ ಆದಾಯ ತೆರಿಗೆಗೆ ಈ ಬಾರಿಯ ಬಜೆಟ್ ನಲ್ಲಿ ಹೆಚ್ಚಿನ ಗಮನ ಹರಿಸಲಾಗುವುದು ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ನವದೆಹಲಿ (ಡಿ. 26): ನೋಟು ನಿಷೇಧ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಆರ್ಥಿಕತೆಯನ್ನು ಪುನರುತ್ತೇಜಿಸಲು ಕಾರ್ಪೋರೇಟ್ ತೆರಿಗೆ ಹಾಗೂ ವೈಯಕ್ತಿಕ ಆದಾಯ ತೆರಿಗೆಗೆ ಈ ಬಾರಿಯ ಬಜೆಟ್ ನಲ್ಲಿ ಹೆಚ್ಚಿನ ಗಮನ ಹರಿಸಲಾಗುವುದು ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಎಂದಿನಂತೆ ಮಾರ್ಚ್ ತಿಂಗಳಿಗಿಂತ ಒಂದು ತಿಂಗಳು ಮುಂಚಿತವಾಗಿ ಫೆ. 1 ರಂದು ಬಜೆಟ್ ಶುರುವಾಗಲಿದೆ ಎಂದು ಜೇಟ್ಲಿ ತಿಳಿಸಿದ್ದಾರೆ.
ಈ ಬಾರಿ ಬಜೆಟ್ ನಲ್ಲಿ ಪ್ರತ್ಯಕ್ಷ ತೆರಿಗೆಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಮುಂದಿನ ವಿತ್ತೀಯ ವರ್ಷದಿಂದ ಸರಕು ಮತ್ತು ಸೇವಾ ತೆರಿಗೆ (ಜಿಎಸ್'ಟಿ) ಜಾರಿಗೆ ಬರಲಿದ್ದು ಪರೋಕ್ಷ ತೆರಿಗೆಯಲ್ಲಿ ಹೆಚ್ಚಿನ ಬದಲಾವಣೆ ಮಾಡಿಲ್ಲ. ಕಸ್ಟಮ್ ಸುಂಕದಲ್ಲಿ ಕೆಲವು ಬದಲಾವಣೆಯಾಗುವ ಸಾಧ್ಯತೆಗಳಿವೆಯಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
