ಬೆಂಗಳೂರಿನಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿತ : 20ಕ್ಕು ಹೆಚ್ಚು ಮಂದಿ ಸಿಲುಕಿರುವ ಶಂಕೆ ?

First Published 15, Feb 2018, 5:12 PM IST
Building Collapse at Bangalore
Highlights

ಸರ್ಜಾಪುರ ರಸ್ತೆಯಲ್ಲಿರುವ ಕಸವನಹಳ್ಳಿ ಕಟ್ಟಡ ಕುಸಿತಗೊಂಡಿದ್ದು ಪೊಲೀಸರು ಹಾಗೂ ಅಗ್ನಿ ಶಾಮಕದಳ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಬೆಂಗಳೂರು(ಫೆ.15): ನಗರದಲ್ಲಿ ಮತ್ತೊಮ್ಮೆ ನಿರ್ಮಾಣ ಹಂತದ 4 ಅಂತಸ್ತಿನ ಕಟ್ಟಡ ಕುಸಿತಗೊಂಡು 20ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸರ್ಜಾಪುರ ರಸ್ತೆಯಲ್ಲಿರುವ ಕಸವನಹಳ್ಳಿ ಕಟ್ಟಡ ಕುಸಿತಗೊಂಡಿದ್ದು ಪೊಲೀಸರು ಹಾಗೂ ಅಗ್ನಿ ಶಾಮಕದಳ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಅವಶೇಷಗಳಡಿ ಸಿಲುಕಿದ್ದ 6 ಮಂದಿಯನ್ನು ಈಗಾಗಲೇ ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದಲ್ಲಿರುವ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.  

loader