ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಜನರ ಬದುಕು ಅಸ್ತವ್ಯಸ್ತಗೊಂಡಿತ್ತು. ಕೋರಮಂಗಲದ ಈಜಿಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ 5 ಅಂತಸ್ತಿನ ಕಟ್ಟಡ ದಿಢೀರ್ ವಾಲಿದೆ. ನಿರ್ಮಾಣ ಹಂತದ ಕಟ್ಟಡದ ಪಿಲ್ಲರ್'ನಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಕಟ್ಟಡ ವಾಲಿದೆ. ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಅಕ್ಕಪಕ್ಕದ ನಿವಾಸಿಗರನ್ನು ಬೇರೆಡೆ ಸ್ಥಳಾಂತರಿಸಿದ್ದಾರೆ.

ಬೆಂಗಳೂರು(ಆ.17): ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಜನರ ಬದುಕು ಅಸ್ತವ್ಯಸ್ತಗೊಂಡಿತ್ತು. ಕೋರಮಂಗಲದ ಈಜಿಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ 5 ಅಂತಸ್ತಿನ ಕಟ್ಟಡ ದಿಢೀರ್ ವಾಲಿದೆ. ನಿರ್ಮಾಣ ಹಂತದ ಕಟ್ಟಡದ ಪಿಲ್ಲರ್'ನಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಕಟ್ಟಡ ವಾಲಿದೆ. ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಅಕ್ಕಪಕ್ಕದ ನಿವಾಸಿಗರನ್ನು ಬೇರೆಡೆ ಸ್ಥಳಾಂತರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗಮನಿಸಬೇಕಾದ ವಿಷಯವೆಂದರೆ ನಿರ್ಮಾಣ ಹಂತದ 5 ಅಂತಸ್ಥಿನ ಕಟ್ಟಡದಲ್ಲಿ ನಿಯಮ ಉಲ್ಲಂಘನೆ ಸ್ಪಷ್ಟವಾಗಿ ಕಂಡುಬಂದಿದೆ. ಬಿಬಿಎಂಪಿ ನಿಯಮ ಪ್ರಕಾರ 20/40 ಚದರ ಅಡಿ ಸೈಟ್'ನಲ್ಲಿ ಕೇವಲ 3 ಅಂತಸ್ತಿನ ಕಟ್ಟಡ ನಿರ್ಮಿಸಲು ಅವಕಾಶವಿದೆ. ಆದರೆ ಇಲ್ಲಿ 5 ಅಂತಸ್ತಿನ ಕಟ್ಟಡ ನಿರ್ಮಿಸಿ ನಿಯಮ ಬ್ರೇಕ್ ಮಾಡಿದ್ದಾರೆ. ಸದ್ಯ ಈಜೀಪುರದಲ್ಲಿ ತೆರವು ಕಾರ್ಯ ನಡೆಯುತ್ತಿದ್ದ, ಇಂದು ಕೂಡ ಮುಂದುವರೆಯಲಿದೆ.