ನಿರ್ಮಾಣ ಹಂತದ ಕಟ್ಟಡದಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟಗೊಂಡ ಘಟನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

ಬೆಂಗಳೂರು(ಜು.16): ನಿರ್ಮಾಣ ಹಂತದ ಕಟ್ಟಡದಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟಗೊಂಡ ಘಟನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೇಗೂರು ಮುಖ್ಯರಸ್ತೆಯ ರಾಯಲ್ ಮೆರಿಡಿಯನ್ ಲೇಔಟ್‌ನ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ಸಂದರ್ಭದಲ್ಲಿ, ಕಲ್ಲಿನ ಬಂಡೆ ಬಂದ ಹಿನ್ನೆಲೆ ಜಿಲೆಟಿನ್ ಕಡ್ಡಿಯಿಂದ ಸ್ಫೋಟಿಸಿದ್ದಾರೆ. ಸ್ಫೋಟದಿಂದ ಕೆಲ ಕಾರ್ಮಿಕರಿಗೆ ಸಣ್ಣಾ ಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಸ್ಥಳೀಯರು ಕೆಲಕಾಲ ಗಾಬರಿಗೊಂಡಿದ್ದು, ಬೇಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲೆಟಿನ್ ಕಡ್ಡಿ ಮತ್ತು ಸ್ಫೋಟಕ ಪುಡಿಯನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಟ್ಟಡ ಮಾಲೀಕ ಮತ್ತು ಕಾರ್ಮಿಕರನ್ನು ವಶಕ್ಕೆ ಪಡೆದು ತನಿಖೆಕೈಗೊಂಡಿದ್ದಾರೆ.