ಹುಬ್ಬಳ್ಳಿ(ಸೆ.30): ಕೆಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಮೈದಾನದಲ್ಲಿ ಕುಳಿತು ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ಬುಕ್ಕಿಗಳನ್ನು ಹುಬ್ಬಳ್ಳಿಯ ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಸುದೀಪ್ ರಾವತ್, ಧೀರತಸಿಂಗ್ ರಾವತ್, ಸೇತುರಾಮ ಗರ್ ಬಂಧಿತ ಬುಕ್ಕಿಗಳಾಗಿದ್ದು, ಬಂಧಿತರಿಂದ ಮೊಬೈಲ್, ನಗದು ವಶಪಡಿಸಿಕೊಳ್ಳಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹುಬ್ಬಳ್ಳಿಯ ರಾಜನಗರದ ಕೆ.ಎಸ್.ಸಿ.ಎ ಮೈದಾನದಲ್ಲಿ ಕೆಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಈ ಮೂವರು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. ಮೈದಾನದಲ್ಲಿ ಕುಳಿತು ಟಿವಿಯಲ್ಲಿ ಪ್ರಸಾರವಾಗುವ ಮುನ್ನವೇ ಹರಿಯಾಣದ ಬಿಲ್ಲಿಗೆ ಮಾಹಿತಿ ನೀಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿದ ಇನ್ಸ್‌ಪೆಕ್ಟರ್ ಜಗದೀಶ್ ಹಂಚಿನಾಳ ಆರೋಪಿಗಳನ್ನು ಬಂಧಿಸಿದ್ದಾರೆ.