ಪ್ರತಿ ಲೀಟರ್ ಹಾಲಿನ ದರದ ಮೇಲೆ ಒಂದು ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು;ಸಿಎಂ ಸಿದ್ದರಾಮಯ್ಯ

ರಾಮನಗರ(ನ.16): ತೀವ್ರ ಬರಗಾಲದಿಂದಾಗಿ ಕಂಗಾಲಾಗಿರುವ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ. ಪ್ರತಿ ಲೀಟರ್ ಹಾಲಿನ ದರದ ಮೇಲೆ ಒಂದು ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಮನಗರದಲ್ಲಿ ನಡೆಯುತ್ತಿರುವ 63 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ರೈತರಿಗೆ ನಾಲ್ಕು ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಈಗ ಅದಕ್ಕೆ ಹೆಚ್ಚುವರಿಯಾಗಿ ಇನ್ನೂ ಒಂದು ರೂಪಾಯಿ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.