ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳು ಸ್ತಬ್ಧವಾಗಿವೆ.

ಬೆಂಗಳೂರು (ಜ.08): ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳು ಸ್ತಬ್ಧವಾಗಿವೆ. ವಿಜಯಪುರದ ದಲಿತ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೋರೆಗಾಂವ್​ ಹಿಂಸಾಚಾರ ಖಂಡಿಸಿ ಬಂದ್​ ನಡೆಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತವಾಗಿದೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಶಾಲೆ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಅಲ್ಲದೇ ಬಸ್ ಸಂಚಾರವನ್ನೂ ಕೂಡ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಧಾರವಾಡ, ಗದಗ ಜಿಲ್ಲೆಗಳಲ್ಲಿ ಬಂದ್‌ಗೆ ವಿವಿಧ ಸಂಘ ಸಂಸ್ಥೆಗಳಿಂದ ಬೆಂಬಲ ವ್ಯಕ್ತವಾಗಿದೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ಆಕ್ರೋಶ ಭುಗಿಲೆದ್ದಿದೆ. ಬಸ್ ನಿಲ್ದಾಣದಲ್ಲಿ ತೆರೆಯಲಾಗಿದ್ದ ಅಂಗಡಿಗಳಿಗೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.