ಇಲ್ಲಿನ ರೈತರು ರಾಜ್ಯ ಸರ್ಕಾರದ ವಿರುದ್ಧ ವಿನೂತನವಾಗಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ರಾಜಸ್ಥಾನ ರಾಜ್ಯ ಸರ್ಕಾರವು ಬಲವಂತವಾಗಿ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವುದನ್ನು ಖಂಡಿಸಿ, ಜಮೀನಿನಲ್ಲಿ ಗುಂಡಿಯನ್ನು ತೋಡಿ, ಅದರಲ್ಲಿ ಅರ್ಧ ಕತ್ತು ಬರುವಂತೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 3 ದಿನಗಳಿಂದ ರೈತರು ಹೀಗೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.
ಜೈಪುರ (ಅ.04): ಇಲ್ಲಿನ ರೈತರು ರಾಜ್ಯ ಸರ್ಕಾರದ ವಿರುದ್ಧ ವಿನೂತನವಾಗಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ರಾಜಸ್ಥಾನ ರಾಜ್ಯ ಸರ್ಕಾರವು ಬಲವಂತವಾಗಿ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವುದನ್ನು ಖಂಡಿಸಿ, ಜಮೀನಿನಲ್ಲಿ ಗುಂಡಿಯನ್ನು ತೋಡಿ, ಅದರಲ್ಲಿ ಅರ್ಧ ಕತ್ತು ಬರುವಂತೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 3 ದಿನಗಳಿಂದ ರೈತರು ಹೀಗೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.
ಜೈಪುರದ ನಿಂದಾರ್ ಗ್ರಾಮದ ರೈತರು ಕಳೆದ 17 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 3 ದಿನಗಳಿಂದ ಈ ರೀತಿ ಕುಳಿತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಯಾವೊಬ್ಬ ಜನಪ್ರತಿನಿಧಿಯೂ ಇದುವರೆಗೂ ಸ್ಥಳಕ್ಕೆ ಭೇಟಿ ನೀಡಿಲ್ಲ. ಹಾಗಾಗಿ ಗಾಂಧಿ ಜಯಂತಿ ದಿನದಿಂದ “ ಜಮೀನ್ ಸಮಾಧಿ ಸತ್ಯಾಗ್ರಹ’ವನ್ನು ಮಾಡುತ್ತಿದ್ದಾರೆ.
