ಮಂಗಳೂರಿನ ಮಾಲ್‌ವೊಂದರಲ್ಲಿ ಬುರ್ಖಾಧಾರಿ ಮಹಿಳೆಯೊಬ್ಬಳು ಸ್ನೇಹಿತೆಯರ ಜೊತೆ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮೂಲಭೂತವಾದಿಗಳಿಂದ ತೀವ್ರ ಆಕ್ಷೇಪಕ್ಕೆ ಗುರಿಯಾಗಿದೆ.
ಮಂಗಳೂರು: ಮಂಗಳೂರಿನ ಮಾಲ್ವೊಂದರಲ್ಲಿ ಬುರ್ಖಾಧಾರಿ ಮಹಿಳೆಯೊಬ್ಬಳು ಸ್ನೇಹಿತೆಯರ ಜೊತೆ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮೂಲಭೂತವಾದಿಗಳಿಂದ ತೀವ್ರ ಆಕ್ಷೇಪಕ್ಕೆ ಗುರಿಯಾಗಿದೆ.
ಒಂದೆರಡು ನಿಮಿಷಗಳ ಈ ವಿಡಿಯೋದಲ್ಲಿ ಸ್ನೇಹಿತೆಯರು ಹಾಡೊಂದಕ್ಕೆ ನೃತ್ಯ ಮಾಡುತ್ತಾರೆ. ಅದನ್ನು ಅನುಸರಿಸಿ ಬುರ್ಖಾಧಾರಿ ಮಹಿಳೆಯೂ ಡ್ಯಾನ್ಸ್ ಮಾಡುತ್ತಾಳೆ. ಈ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮುಸ್ಲಿಂ ಧಾರ್ಮಿಕ ಸಂಪ್ರದಾಯದಲ್ಲಿ ಬುರ್ಖಾ ಧರಿಸಿ ನೃತ್ಯ ಮಾಡಲು ಅವಕಾಶ ಇಲ್ಲ ಎಂದು ಕೆಲವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
