ಘಾಟಿಯಲ್ಲಿ ತೆರಳುತ್ತಿದ್ದ ವೇಳೆ ಬಸ್ ಉರುಳಿ ಬಿದ್ದು 35ಕ್ಕೂ ಅಧಿಕ ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಅಧಿಕ ಮಂದಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. 

ರಾಯಘಡ: ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಅತೀ ಆಳದ ಕಂದಕ್ಕೆ ಉರುಳಿ ಬಿದ್ದು 35ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 

ಮಹಾರಾಷ್ಟ್ರದ ರಾಯ್ ಘಡದ ಮಹಾಬಲ್ಲೇಶ್ವರ್ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಂಬೇಲಿ ಘಾಟ್ ನ ಪರ್ವತ ಪ್ರದೇಶದಲ್ಲಿ ತೆರಳುತ್ತಿದ್ದ ವೇಳೆ ಬಸ್ 250 ರಿಂದ 300 ಅಡಿ ಆಳದ ಕಂದಕಕ್ಕೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. 

ಇಲ್ಲಿನ ದೀಪೋಲಿ ಕೃಷಿ ವಿವಿಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಬಸ್ ನಲ್ಲಿದ್ದರು. ದುರ್ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಎನ್ ಡಿಆರ್ ಎಫ್ ಪಡೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. 

ಬಸ್ ನಲ್ಲಿ 60 ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದು, ಅಧಿಕ ಮಂದಿ ಗಾಯಗೊಂಡಿದ್ದು ಗಾಯಾಳುಗಳನ್ನು ರಿಶಿಕೇಶದ ಆಸ್ಪತ್ರೆಗೆ ಸಾಗಿಸಲಾಗಿದೆ. 

ಕೆಲ ದಿನಗಳ ಹಿಂದೆಯಷ್ಟೇ ಉತ್ತರಾಖಂಡ್ ನಲ್ಲಿ ಬಸ್ ಕಂದಕಕ್ಕೆ ಉರುಳಿ ಬಿದ್ದು 48 ಮಂದಿ ಮೃತಪಟ್ಟಿದ್ದರು. 

Scroll to load tweet…