ವೈದ್ಯರ ಮುಷ್ಕರದಿಂದಾಗಿ ರಾಜ್ಯದಲ್ಲಿ 13 ಮಂದಿ ಮೃತಪಟ್ಟಿದ್ದರೂ ವೈದ್ಯರು ತಮ್ಮ ಹಠವನ್ನು ಬಿಡದೇ ತಮ್ಮ ಪ್ರತಿಭಟನೆಯನ್ನು ಮುಂದುವರೆಸುತ್ತಿದ್ದಾರೆ. ಮುಷ್ಕರ 3 ನೇ ದಿನಕ್ಕೆ ಕಾಲಿಟ್ಟಿದೆ.
ಬೆಂಗಳೂರು (ನ.15): ವೈದ್ಯರ ಮುಷ್ಕರದಿಂದಾಗಿ ರಾಜ್ಯದಲ್ಲಿ 13 ಮಂದಿ ಮೃತಪಟ್ಟಿದ್ದರೂ ವೈದ್ಯರು ತಮ್ಮ ಹಠವನ್ನು ಬಿಡದೇ ತಮ್ಮ ಪ್ರತಿಭಟನೆಯನ್ನು ಮುಂದುವರೆಸುತ್ತಿದ್ದಾರೆ. ಮುಷ್ಕರ 3 ನೇ ದಿನಕ್ಕೆ ಕಾಲಿಟ್ಟಿದೆ.
ನಾಳೆಯಿಂದ ಖಾಸಗಿ ವೈದ್ಯರ ಮುಷ್ಕರ ಇನ್ನಷ್ಟು ತೀವ್ರವಾಗಲಿದೆ. ಬೆಂಗಳೂರಿನ ಮಲ್ಟಿ ಸ್ಪೆಷಲ್ ಆಸ್ಪತ್ರೆಗಳು ನಾಳೆ ಸಂಪೂರ್ಣ ಬಂದ್ ಆಗಲಿವೆ. ಖಾಸಗಿ ಆಸ್ಪತ್ರೆಗಳಲ್ಲಿ ಹೊರರೋಗಿಗಳ ವಿಭಾಗ ಸ್ಥಗಿತಗೊಳ್ಳಲಿದೆ.
ತುರ್ತು ಒಪಿಡಿ ಹೊರತುಪಡಿಸಿ ಎಲ್ಲ ಘಟಕಗಳ ಸ್ಥಗಿತಕ್ಕೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ವೈದ್ಯರ ಮುಷ್ಕರಕ್ಕೆ ಐಎಂಎ, ಪಾನಾ ಸೇರಿದಂತೆ ಖಾಸಗಿ ಆಸ್ಪತ್ರೆಗಳ 5 ಸಂಘಗಳು ಬೆಂಬಲ ವ್ಯಕ್ತಪಡಿಸಿವೆ.
ನಾಳೆ ಬೆಳಗ್ಗೆ 8 ಗಂಟೆಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿಧೇಯಕ ವಾಪಸ್ ಪಡೆಯುವವರೆಗೂ ಪ್ರತಿಭಟನೆ ಮುಂದುವರಿಯಲಿದೆ. ರಾಜ್ಯದಲ್ಲಿ ರೋಗಿಗಳ ಸಾವಿಗೆ ಸರ್ಕಾರವೇ ನೇರ ಹೊಣೆ. ಸರ್ಕಾರ ಹಠಮಾರಿ ಧೋರಣೆ ಅನುಸರಿಸುತ್ತಿದೆ ಎಂದು ಪಾನಾ ಚುನಾಯಿತ ಅಧ್ಯಕ್ಷ ಡಾ.ಜಯಣ್ಣ ಆರೋಪಿಸಿದ್ದಾರೆ.
