ಜೆಡಿಎಸ್ ಅಧಿಕಾರಕ್ಕೆ ಬಂದು ದಲಿತರಿಗೆ ಡಿಸಿಎಂ ಸ್ಥಾನ ನೀಡುವುದಕ್ಕೂ ಮೊದಲು ದಲಿತ ಅಥವಾ ಮುಸಲ್ಮಾನರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಲಿ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹಮದ್ ಭಾನುವಾರ ಎಚ್.ಡಿ. ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.

ಮಂಡ್ಯ: ಜೆಡಿಎಸ್ ಅಧಿಕಾರಕ್ಕೆ ಬಂದು ದಲಿತರಿಗೆ ಡಿಸಿಎಂ ಸ್ಥಾನ ನೀಡುವುದಕ್ಕೂ ಮೊದಲು ದಲಿತ ಅಥವಾ ಮುಸಲ್ಮಾನರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಲಿ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹಮದ್ ಭಾನುವಾರ ಎಚ್.ಡಿ. ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.

ಅಧಿಕಾರಕ್ಕೆ ಬಂದರೆ ದಲಿತ ಅಥವಾ ಮುಸ್ಲಿಮರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಹೇಳಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ನಡೆದಿದ್ದ ಪಕ್ಷದ ಸಮಾವೇಶದಲ್ಲಿ ಹೇಳಿದ್ದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಜೆಡಿಎಸ್ ಪಕ್ಷದ ಪ್ರಮುಖ ಹುದ್ದೆಗಳು ಅವರ ಕುಟುಂಬದವರ ಕೈಯಲ್ಲಿವೆ. ಹೀಗಿರುವಾಗ ಅಧಿಕಾರ ವಿಕೇಂದ್ರೀಕರಣ ಮತ್ತು ಪಕ್ಷದ ಬೆಳವಣಿಗೆ ಹೇಗೆ ಸಾಧ್ಯ? ಕಾಂಗ್ರೆಸ್‌ನಲ್ಲಿ ಅಧ್ಯಕ್ಷರ ಘೋಷಣೆಯನ್ನು ಹೈಕಮಾಂಡ್ ಮಾಡುತ್ತದೆ. ಜೆಡಿಎಸ್‌ನಲ್ಲಿ ಎಲ್ಲಾ ನಿರ್ಧಾರಗಳನ್ನು ಒಂದೇ ಕುಟುಂಬದವರೇ ತೆಗೆದುಕೊಳ್ಳುವುದರಿಂದ ಆ ಪಕ್ಷದ ಅಧ್ಯಕ್ಷ ಸ್ಥಾನವನ್ನು ದಲಿತರಿಗೆ ಅಥವಾ ಅಲ್ಪಸಂಖ್ಯಾತರಿಗೆ ಘೋಷಣೆ ಮಾಡಲಿ ಎಂದರು. ಸಿದ್ದರಾಮಯ್ಯ ಆಪರೇಷನ್ ಕಮಲಕ್ಕೆ ಬೆಂಬಲ ವ್ಯಕ್ತಪಡಿಸಿದ್ದರ ಬಗ್ಗೆ ಈ ಹಿಂದೆ ಏಕೆ ಎಚ್‌ಡಿಕೆ ಹೇಳಲಿಲ್ಲ ಎಂದರು.