ನವದೆಹಲಿ, [ಆ.28]: ಕಬ್ಬು ಬೆಳೆಯುವ ರೈತರಿಗೆ ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ಸಮ್ಮತಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ  ಇಂದು [ಬುಧವಾರ] ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಸಕ್ಕರೆ ರಫ್ತಿಗಾಗಿ ಕಬ್ಬು ಬೆಳೆಗಾರರಿಗೆ ಸಬ್ಸಿಡಿ ನೀಡಲು ಅನುಮೋದನೆ ಸಿಕ್ಕಿದೆ.

ಸಕ್ಕರೆ ರಫ್ತಿಗಾಗಿ ಕಬ್ಬ ಬೆಳೆಗಾರರಿಗೆ ಪ್ರತಿ ಮೆಟ್ರಿಕ್ ಟನ್‌ಗೆ 10,448 ರು. ಸಬ್ಸಿಡಿ ದೊರೆಯಲಿದೆ.  ಇದರಿಂದ ಕಬ್ಬು ಬೆಳೆಗಾರರಿಗೆ ಸಬ್ಸಿಡಿ ನೀಡಲು 6268 ಕೋಟಿ ರು.ಗಳನ್ನು ಖರ್ಚು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಪರಿಸರ, ಅರಣ್ಯ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ವಿವರಿಸಿದರು. 

 ಈ ಮೂಲಕ ಕರ್ನಾಟಕ ಕೂಡ ಕಬ್ಬು ಬೆಳೆಯುವ ರಾಜ್ಯಗಳಲ್ಲಿ ಒಂದಾಗಿದ್ದು, ರಾಜ್ಯದ ಕಬ್ಬು ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ದೇಶಾದ್ಯಂತ 75 ಮೆಡಿಕಲ್ ಕಾಲೇಜುಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.