ಬಿಜೆಪಿ ರಥ ಯಾತ್ರೆಗೆ ಮತ್ತೆ ಬಿತ್ತು ಬ್ರೇಕ್| ಶಾ ರಥ ಯಾತ್ರೆಗೆ ತಡೆ ನೀಡಿ ಹೈಕೋರ್ಟ್ ಆದೇಶ| ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ 'ಪ್ರಜಾಪ್ರಭುತ್ವ ಉಳಿಸಿ' ರಥ ಯಾತ್ರೆ| ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ ವಿಭಾಗೀಯ ಪೀಠ| ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಒಳಗೊಂಡ ವಿಭಾಗೀಯ ಪೀಠ
ಕೋಲ್ಕತ್ತಾ(ಡಿ.21): ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಉದ್ದೇಶಿತ ರಥ ಯಾತ್ರೆಗೆ ಮತ್ತೆ ತಡೆ ಬಿದ್ದಿದೆ. ನಿನ್ನೆಯಷ್ಟೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ರಥ ಯಾತ್ರೆಗೆ ಕೋಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿತ್ತು. ಆದರೆ ಇಂದು ಅದೇ ಹೈಕೋರ್ಟ್ ಅನುಮತಿ ನಿರಾಕರಿಸಿದೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆಗೆ ಅವಕಾಶ ಕಲ್ಪಿಸಿದ ಏಕ ಸದಸ್ಯ ಪೀಠದ ಆದೇಶವನ್ನು ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಾಧೀಶರನ್ನೊಳಗೊಂಡ ವಿಭಾಗೀಯ ಪೀಠ ಪ್ರಶ್ನಿಸಿದೆ.
ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿತ್ತು.
ರಥ ಯಾತ್ರೆಯಿಂದ ಕೋಮುಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಪಶ್ಚಿಮ ಬಂಗಾಳ ಸರ್ಕಾರ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ರಥ ಯಾತ್ರೆಗೆ ಅನುಮತಿ ನೀಡಲು ನಿರಾಕರಿಸಿತ್ತು.
ಅಲ್ಲದೇ ರಾಜ್ಯ ಸರ್ಕಾರ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠದಲ್ಲಿ ಪ್ರಶ್ನಿಸಿದ್ದರು. ಈಗ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದೆ.
