ಮಾ.16ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಂಬಂಧ ಮಾ.14 ರಂದು ದೆಹಲಿಗೆ ತೆರಳಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾ ಸರ್ಕಾರ ರಚನೆಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
ಚಂಡಿಗಢ(ಮಾ.12): ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಸಾಧಿಸಿದ ನಂತರ ಹಿರಿಯ ಕಾಂಗ್ರೆಸ್ ನಾಯಕ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ.
ಮಾ.16ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಂಬಂಧ ಮಾ.14 ರಂದು ದೆಹಲಿಗೆ ತೆರಳಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾ ಸರ್ಕಾರ ರಚನೆಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ.ಅಮರೇಂದರ್ ಸಿಂಗ್ ಕಾಂಗ್ರೆಸ್'ನ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ನೂತನವಾಗಿ ಆಯ್ಕೆಯಾದ ಪಕ್ಷದ ಶಾಸಕರೊಂದಿಗೆ ಇಂದು ಸಭೆ ನಡೆಸಿದರು.
ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು,ಮಾಜಿ ಹಾಕಿ ಆಟಗಾರ ಪಾರ್ಗತ್ ಸಿಂಗ್ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದಾರೆ.117 ವಿಧಾನಸಭಾ ಕ್ಷೇತ್ರದಲ್ಲಿ ಹಸ್ತಕ್ಕೆ 77 ಸ್ಥಾನ ಲಭಿಸಿವೆ.
