ಕಾರಿನ ಚಕ್ರದ ಸಿಡಿದು ಮುಂಭಾಗದ ಬೆಂಗಾವಲು ಪಡೆ ವಾಹನಕ್ಕೆ ಡಿಕ್ಕಿ ಹೊಡೆದಿದೆ

ಮೈಸೂರು(ಡಿ.14): ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರಯಾಣಿಸುತ್ತಿದ್ದ ಕಾರು ಮೈಸೂರು ಬಳಿಯ ಮಹದೇವಪುರ ರಿಂಗ್ ರಸ್ತೆಯ ಬಳಿ ಅಪಘಾತಕ್ಕೀಡಾಗಿದೆ. ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಅಪಾಯದಿಂದ ಪಾರು. ಕಾರಿನ ಚಕ್ರದ ಸಿಡಿದು ಮುಂಭಾಗದ ಬೆಂಗಾವಲು ಪಡೆ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಜಖಂ ಆಗಿದೆ. ಸಿದ್ದಾರ್ಥ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.