Asianet Suvarna News Asianet Suvarna News

ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿ ಕಾರಿಗೆ ಬೆಂಕಿ: ನೋಡ ನೋಡುತ್ತಿದ್ದಂತೆ ಸುಟ್ಟು ಕರಕಲಾದ ಕಾರು

ಆಕಸ್ಮಿಕವಾಗಿ ಕಾರಿಗೆ ಬೆಂಕಿ ತಗುಲಿದ ಪರಿಣಾಮ ಕಾರಿನ  ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿ ನಡೆದಿದೆ.

Car Caught With Fire
  • Facebook
  • Twitter
  • Whatsapp

ಬೆಂಗಳೂರು(ಜು.06): ಆಕಸ್ಮಿಕವಾಗಿ ಕಾರಿಗೆ ಬೆಂಕಿ ತಗುಲಿದ ಪರಿಣಾಮ ಕಾರಿನ  ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿ ನಡೆದಿದೆ.

ಇಂಜಿನ್​​'ನಲ್ಲಿ  ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲೇ ಹೋಗುತ್ತಿದ್ದ ವಾಹನ ಸವಾರರು ಕಾರ್​ ಚಾಲಕನನ್ನು  ಎಚ್ಚರಿಸಿ ವಾಹನ ನಿಲ್ಲಿಸಿದ್ದಾರೆ. ಚಾಲಕ ಕಾರಿನಿಂದ ಇಳಿಯುತ್ತಿದ್ದಂತೆ ನಡುರಸ್ತೆಯಲ್ಲೆ ಕಾರು ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆಬಂದ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಬೆಂಕಿಯನ್ನು ಆರಿಸಿದರು.

ಇದೇ ವೇಳೆ ಘಟನೆಯಿಂದ ಕೆಲಹೊತ್ತು ರಿಚ್'ಮಂಡ್​​ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಾಗಿ ವಾಹನ ಸವಾರರು ಪರದಾಡುವಂತಾಯಿತು. ಇನ್ನು ಘಟನೆಯಿಂದ ಕಾರಿನ ಮುಂಭಾಗ ಸಂಪೂರ್ಣ ಸುಟ್ಟುಹೋಗಿದ್ದು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ .

ಎಂಜಿ ರಸ್ತೆಯಿಂದ ಮನೆಗೆ ಹೋಗುವಾಗ ಘಟನೆ ನಡೆದಿದ್ದು, ಅಶೋಕನಗರ ಸಂಚಾರಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Follow Us:
Download App:
  • android
  • ios