ಬೆಂಗಳೂರು [ಜು.05]:  ಹಿರಿಯ ವ್ಯಂಗ್ಯಚಿತ್ರ ಕಲಾವಿದ ವಿ.ಗೋಪಾಲ್(72) ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೋಲಾರ ಮೂಲದ ಗೋಪಾಲ್ ಅವರು ದಶಕಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. 

ಮೃತರು ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ ಅಭಿಮಾನಿಗಳನ್ನು ಆಗಲಿದ್ದಾರೆ. ವಿಶಿಷ್ಟ ಶೈಲಿಯ ವ್ಯಂಗ್ಯಚಿತ್ರಗಳಿಂದ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಅವರ ಸಾವಿರಾರು ವ್ಯಂಗ್ಯಚಿತ್ರಗಳು ನಾಡಿನ ಬಹುತೇಕ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.  ದೇಶ-ವಿದೇಶ ಗಳಲ್ಲಿ ನಡೆದ ಹಲವು ವ್ಯಂಗ್ಯಚಿತ್ರ ಪ್ರದರ್ಶನಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. 

ನಾಡಿನ ಹೆಸರಾಂತ ವ್ಯಂಗ್ಯಚಿತ್ರಕಾರ ದಿವಂಗತ ಎಂ.ಟಿ.ವಿ.ಆಚಾರ್ಯ ಗರಡಿಯಲ್ಲಿ ಕಲಾವಿದರಾಗಿ ರೂಪುಗೊಂಡಿದ್ದರು. ಕರ್ನಾಟಕ ವ್ಯಂಗ್ಯಚಿತ್ರಕಾರರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.