ಬೆಂಗಳೂರು (ಆ. 28): ಹಿಂದೂಗಳ ಭಾವನೆ ಕೆರಳಿಸಿದ ಆರೋಪದ ಮೇಲೆ ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.  

ಗೋವುಗಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎಂದು ವಕೀಲ ಎನ್​.ಕಿರಣ್​ ಎಂಬುವವರು ದೂರು ಸಲ್ಲಿಸಿದ್ದಾರೆ. 

ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿ ದೂರು ಸಲ್ಲಿಸಲಾಗಿದ್ದು  ಪ್ರಕರಣ ಸಂಬಂಧ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂಡಿದೆ. 

ಖಾಸಗಿ ಕಾರ್ಯಕ್ರಮವೊಂದರಲ್ಲಿ ಗೋವುಗಳ ಬಗ್ಗೆ ಪ್ರಕಾಶ್ ರೈ ಕೆಟ್ಟದಾಗಿ ಮಾತನಾಡಿದ್ದಾರೆ ಎನ್ನಲಾಗಿದೆ.  ಹಲವೆಡೆ ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿರುವುದು ಇದಕ್ಕೆ ಸೇರಿದೆ. 

ಪ್ರಕಾಶ್​ ರೈ​ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ವಕೀಲ ಎನ್.ಕಿರಣ್ ಮನವಿ ಮಾಡಿದ್ದಾರೆ.