ಅಪ್ರಾಪ್ತೆ ಮೇಲೆ ಅತ್ಯಾಚಾರ: ಕೊನೆಗೂ ಬಿಜೆಪಿ ಶಾಸಕನ ವಿರುದ್ಧ ದಾಖಲಾಯಿತು ಪ್ರಕರಣ

First Published 12, Apr 2018, 2:46 PM IST
Case Registered Against BJP MLA in Unnao Rape Case
Highlights
  • ಬಿಜೆಪಿ ಶಾಸಕ ಆರೋಪಿಯಾಗಿರುವ ಅತ್ಯಾಚಾರ ಪ್ರಕರಣ ಸಿಬಿಐ ತನಿಖೆಗೆ
  • ಸಂತ್ರಸ್ತೆ ಕುಟುಂಬದವರಿಗೆ ಸೂಕ್ತ ರಕ್ಷಣೆ

ಲಕ್ನೋ: ದೇಶಾದ್ಯಂತ ಭಾರೀ ಚರ್ಚೆಗೊಳಗಾಗಿದ್ದ ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಉತ್ತರ ಪ್ರದೇಶ ಪೊಲೀಸರು ಕೊನೆಗೂ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೇನ್’ಗಾರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಅತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆಯೆಂದು ರಾಜ್ಯ ಗೃಹ ಕಾರ್ಯದರ್ಶಿ ಅರವಿಂದ್ ಕುಮಾರ್ ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಸಿಬಿಐ ತನಿಖೆಯನ್ನು ಆರಂಭಿಸುವವರೆಗೆ ರಾಜ್ಯ ಪೊಲೀಸರು ತನಿಖೆ ನಡೆಸಲಿದ್ದಾರೆಂದು ಅವರು ತಿಳಿಸಿದ್ದಾರೆ.

ಅತ್ಯಾಚಾರ ಆರೋಪಿ ಶಾಸಕನನ್ನು ಬಂಧಿಸಲಾಗುವುದೇ ಎಂಬ ಪ್ರಶ್ನೆಗೆ, ಅದನ್ನು ಸಿಬಿಐ ನಿರ್ಧರಿಸಲಿದೆಯೆಂದು ಅವರು ಹೇಳಿದ್ದಾರೆ. ಶಾಸಕ ಹಾಗೂ ಸಂತ್ರಸ್ತೆಯ ಹೇಳಿಕೆಗಳನ್ನು ದಾಖಲಿಸಲಾಗಿದೆ. ಸಂತ್ರಸ್ತೆಯ ಕುಟುಂಬದವರಿಗೆ ಸೂಕ್ತ ರಕ್ಷಣೆ ನೀಡಲಾಗುವುದೆಂದು ಅವರು ಹೇಳಿದ್ದಾರೆ.

ಕಳೆದ ಜೂನ್’ನಲ್ಲಿ ಶಾಸಕ ತನ್ನ ಮೇಲೆ ಅತ್ಯಾಚಾರವೆಸಗಿದ್ದು, ಆ ಬಗ್ಗೆ ದೂರು ನೀಡಿದರೂ ಪೊಲೀಸರು ಪ್ರಕರಣವನ್ನು ದಾಖಲಿಸಿಲ್ಲವೆಂದು ಹೇಳಲಾಗಿದೆ.

loader