ಬೆಳಗಾವಿ: ಉತ್ತರ ಕರ್ನಾಟಕದ ಜನರ ಮಹತ್ವಾಕಾಂಕ್ಷೆಯ ಮಹದಾಯಿ ಯೋಜನೆ ಅನುಷ್ಠಾನ ಕುರಿತು ರಾಜ್ಯ ಸರ್ಕಾರ 15 ದಿನಗಳಲ್ಲಿ ಸ್ಪಷ್ಟ ನಿರ್ಧಾರವೊಂದಕ್ಕೆ ಬರಲಿದೆ, ಜತೆಗೆ ಮಹದಾಯಿ ಹೋರಾಟಗಾರರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಶೀಘ್ರವೇ ಹಿಂಪಡೆಯಲಿದೆ.

ಪ್ರಕರಣಗಳ ಬಗ್ಗೆ ಹೋರಾಟಗಾರರು ಆತಂಕ ಪಡಬೇಕಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಶನಿವಾರ ಕುಂದಾನಗರಿ ಬೆಳಗಾವಿಯಲ್ಲಿ ಕನ್ನಡ ಸಾಂಸ್ಕೃತಿಕ ಭವನ ಉದ್ಘಾಟಿಸಿ ಮಾತನಾಡಿ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಈ ಭಾಗದ ಜನರ ಕುಡಿಯುವ ನೀರಿಗಾಗಿ ರೂಪಿಸಲಾಗಿರುವ ಮಹದಾಯಿ ಯೋಜನೆಯಲ್ಲಿ ನೀರಿನ ಬಳಕೆ ಹಾಗೂ ನ್ಯಾಯಾಧಿಕರಣ ಆದೇಶ ಅನುಷ್ಠಾನ ವಿಚಾರವಾಗಿ ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುತ್ತಿದೆ. 15 ದಿನಗಳಲ್ಲಿ ಸರ್ಕಾರ ಸ್ಪಷ್ಟ ತೀರ್ಮಾನವೊಂದಕ್ಕೆ ಬರಲಿದೆ ಎಂದರು.