ಜಾನುವಾರು ಮಾರುಕಟ್ಟೆಯಿಂದ ಹಸುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವುದನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ನಿಯಮಾವಳಿಗೆ ಮದ್ರಾಸ್ ಹೈಕೋರ್ಟ್ 4 ವಾರಗಳ ತಡೆಯಾಜ್ಞೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿದೆ.
ನವದೆಹಲಿ (ಮೇ.30): ಜಾನುವಾರು ಮಾರುಕಟ್ಟೆಯಿಂದ ಹಸುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವುದನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ನಿಯಮಾವಳಿಗೆ ಮದ್ರಾಸ್ ಹೈಕೋರ್ಟ್ 4 ವಾರಗಳ ತಡೆಯಾಜ್ಞೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿದೆ.
ನ್ಯಾ. ಎಂ.ವಿ ಮುರುಳೀಧರನ್, ನ್ಯಾ. ಸಿವಿ ಕಾರ್ತಿಕೇಯನ್ ನೇತೃತ್ವದ ನ್ಯಾಯಪೀಠವು ಕೇಂದ್ರ ಸರ್ಕಾರದ ಅಧಿಸೂಚನೆಗೆ ಮಧ್ಯಂತರ ಆದೇಶ ನೀಡಿದೆ. ಸೆಲ್ವ ಗೋಮತಿ ಮತ್ತು ಅಸೀಕ್ ಎಲಾಹಿ ಬಾಬಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಆಹಾರದ ಆಯ್ಕೆಯು ಪ್ರತಿಯೊಬ್ಬರ ವೈಯಕ್ತಿಕ ಹಕ್ಕು. ಅದನ್ನು ನಿರ್ಧರಿಸಲು ಯಾರಿಗೂ ಹಕ್ಕಿಲ್ಲವೆಂದು ಅರ್ಜಿಯಲ್ಲಿ ಹೇಳಲಾಗಿದೆ.
