ಸುಪ್ರೀಂಕೋರ್ಟ್`ನಲ್ಲಿ ನಾಳೆ ವಿಚಾರಣೆ

ನವದೆಹಲಿ(ಸೆ.11): ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಸುಪ್ರೀಂಕೋರ್ಟ್​ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ನಾಳೆ ಬೆಳಗ್ಗೆ 10.30ಕ್ಕೆ ನ್ಯಾ.ದೀಪಕ್​ ಮಿಶ್ರಾ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ.

ಸೆ.5ರಂದು ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸುಪ್ರೀಂ ಆದೇಶಿಸಿತ್ತು. ಇದಾದ ಬಳಿಕ, ರಾಜ್ಯಾದ್ಯಂತ ಹೋರಾಟಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ನೀರು ಹಂಚಿಕೆ ಆದೇಶ ಮಾರ್ಪಡಿಸಲು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ.