ಬೆಂಗಳೂರು (ಸೆ.12): ಕಾವೇರಿ ನದಿ ನೀರು ಹಂಚಿಕೆ ಸಂಬಂಧಪಟ್ಟಂತೆ ಸುಪ್ರೀಂಕೊರ್ಟ್ ಆದೇಶದ ವಿರುದ್ಧ ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯ ಕಿಚ್ಚು ಹೆಚ್ಚಾಗುತ್ತಿದ್ದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸುದ್ದಿಗೋಷ್ಠಿನಡೆಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ಪ್ರತಿಭಟನಾಕಾರರು ಬಸ್ ಲಾರಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡಿನ 27 ವಾಹನಗಳಿಗೆ ಹಾನಿ ಮತ್ತು ಬೆಂಕಿ ಹಚ್ಚಲಾಗಿದೆ. ತಮಿಳುನಾಡಿನಲ್ಲಿ ಕರ್ನಾಟಕದ ವಾಹನಗಳಿಗೂ ಹಾನಿ ಮಾಡಲಾಗಿದೆ.
ಮುಂಜಾಗ್ರತ ಕ್ರಮವಾಗಿ ಬೆಂಗಳೂರು ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸುವಂತೆ ನಗರ ಪೊಲೀಸ್ ಆಯುಕ್ತ ಮೇಘರೀಕ್ ಆದೇಶಿಸಿದ್ದಾರೆ.
ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ಗದಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತಿಭಟನೆಯಾಗಿದೆ.
