ನವದೆಹಲಿ(ಸೆ.30): ಕಾವೇರಿ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಅ.1ರಿಂದ ಅ.6 ರವರೆಗೆ ತಮಿಳುನಾಡಿಗೆ ನೀರು ಬಿಡಬೇಕು ಎಂದು ಆದೇಶಿಸಿರುವ ಸುಪ್ರೀಂ ಕೋರ್ಟ್ ಕರ್ನಾಟಕದ ವಾದಕ್ಕೆ ಎಳ್ಳು, ನೀರು ಬಿಟ್ಟಿದೆ.

ಅ.1ರಿಂದ ಅ.6 ರವರೆಗೆ ತ.ನಾಡಿಗೆ 6 ಸಾವಿರ ಕ್ಯೂಸೆಕ್​ ನೀರು ಬಿಡಬೇಕು ಎಂದು ತೀರ್ಪು ನೀಡಿರುವ ಸುಪ್ರೀಂ, ಒಟ್ಟು 36 ಸಾವಿರ ಕ್ಯೂಸೆಕ್​ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ. ಇಷ್ಟೇ ಅಲ್ಲದೆ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.

ಅ.4ರೊಳಗೆ ಕಾವೇರಿ ಮಂಡಳಿ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಆದೇಶ ಪಾಲಿಸಿಲ್ಲ. ಇದರಿಂದ ನ್ಯಾಯಾಂಗ ವ್ಯವಸ್ಥೆಗೆ ಧಕ್ಕೆ ತಂದಿದೆ. ದೇಶದ ಎಲ್ಲಾ ರಾಜ್ಯಗಳು ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕು. ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯವೂ ಒಂದು. ನ್ಯಾಯಾಂಗದ ಆದೇಶವನ್ನು ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದೇ ವೇಳೆ ಕರ್ನಾಟಕ ಪರ ವಕೀಲ ವಾದ ಮಂಡನೆಯಿಂದ ಹಿಂದೆ ಸರಿದಿದ್ದಾರೆ ಎಂಬ ವಿಚಾರವೂ ಮೂಲಗಳಿಂದ ತಿಳಿದು ಬಂದಿದೆ.