Asianet Suvarna News Asianet Suvarna News

ನ್ಯಾಯಾಂಗ ಹಾಗೂ ಶಾಸಕಾಂಗ ಮಧ್ಯೆ ಸಂಘರ್ಷ: ಏನೇ ಆದರೂ ಸಿಎಂ ನಿರ್ಧಾರ ಅಚಲ?

Cauvery Issue today afternoon all party meeting

ಬೆಂಗಳೂರು(ಅ.01): ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಪ್ರಮಾಣ ತೀವ್ರ ಕುಸಿದಿದೆ. ಹೀಗಾಗಿ ನೀರು ಬಿಡುವ ಸ್ಥಿತಿಯಲ್ಲಿ ರಾಜ್ಯ ಇಲ್ಲವೇ ಇಲ್ಲ. ಆದರೆ ನ್ಯಾಯಾಂಗ ನಿಂದನೆಯಿಂದ ತಪ್ಪಿಸಿಕೊಳ್ಳಬೇಕೆಂದರೆ ಸರ್ವಪಕ್ಷಗಳ ಸಮ್ಮತಿ ಬೇಕು ಹಾಗೂ ಮತ್ತೊಮ್ಮೆ ಅಧಿವೇಶನ ಕರೆದು ಒಪ್ಪಿಗೆ ಪಡೆಯಬೇಕು. ಕಾವೇರಿ ಕೊಳ್ಳದ ಜಲಾಶಯಗಳಿಗೆ ಒಳಹರಿವಿನಿಂದ ಬಂದು ಸೇರಿ ಏರಿಕೆಯಾಗಿರುವ ಪ್ರಮಾಣದ ನೀರನ್ನು ಬಿಡುವ ಮತ್ತೊಂದು ಮಾರ್ಗವನ್ನೂ ಕಾನೂನು ತಜ್ಞರು ರಾಜ್ಯ ಸರ್ಕಾರಕ್ಕೆ ತೋರಿಸಿದ್ದಾರೆ. ಆದ್ರೆ ಏಕಾಏಕಿ ನಿರ್ಧಾರ ಬೇಡ ಅಂತ ಸರ್ವಪಕ್ಷ ಸಭೆಯ ಮೊರೆ ಹೋಗಲು ಸಿಎಂ ಸಿದ್ರಾಮಯ್ಯ ನಿರ್ಧರಿಸಿದ್ದಾರೆ.

ಹೀಗಾಗಿ ಮಧ್ಯಾಹ್ನ 2 ಗಂಟೆಗೆ ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು. ಕಾನೂನು ತಜ್ಞರು ತಮ್ಮ ಅಭಿಪ್ರಾಯ ಹೇಳಲಿದ್ದಾರೆ. ಈ ಸಭೆಯ ನಂತರ ಸರ್ಕಾರ ಮುಂದಿನ ನಡೆ ಅಂತಿಮ ಆಗುತ್ತೆ. ಒಂದು ಮೂಲಗಳ ಪ್ರಕಾರ ಸಿಎಂ ಸಿದ್ದರಾಮಯ್ಯ ಕಾವೇರಿ ಹೋರಾಟವನ್ನ ನಾಡಿನ ರೈತ ಮತ್ತು ಮತದಾರರ ಹಿತದೃಷ್ಟಿಯಿಂದ ಎದುರಿಸಲು ಮಾನಸಿಕವಾಗಿ ಸಜ್ಜಾಗಿದ್ದಾರೆ. ನಿನ್ನೆಯಷ್ಟೇ ದೀಪಕ್ ಮಿಶ್ರಾ ಹಾಗೂ ಉದಯ್ ಲಲಿತ್​​ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ, ಇಂದಿನಿಂದ 6 ದಿನಗಳ ಕಾಲ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು

Follow Us:
Download App:
  • android
  • ios