ಮಂಡ್ಯ (ಸೆ.19): ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡಲು ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ.
ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿ ಮಂಡ್ಯದಲ್ಲಿ ಜಿಲ್ಲಾದ್ಯಂತ ನಾಳೆ ಮದ್ಯ ಮಾರಾಟ ನಿಷೇಧ ಕೈಗೊಳ್ಳಲಾಗಿದೆ.
ನಾಳೆ ಬೆಳಗ್ಗೆ 6 ಗಂಟೆಯಿಂದ ನಾಡಿದ್ದು ಬೆಳಗ್ಗೆ 6ರವರೆಗೆ ಮದ್ಯ ನಿಷೇಧವಿದೆ.
ಮುಂಜಾಗ್ರತಾ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಜಿಯಾವುಲ್ಲಾ ಆದೇಶಿಸಿದ್ದಾರೆ.
