ಕೊಡಗು (ಅ.17): ಬೆಳಗ್ಗೆ 6:29 ನಿಮಿಷಕ್ಕೆ ಮಿಥುನ ಲಗ್ನದಲ್ಲಿ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವ ನಡೆಯಿತು.

ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆದ ತೀರ್ಥೋದ್ಭವದಲ್ಲಿ ತೀರ್ಥಸ್ವರೂಪಿಣಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ  ಬ್ರಹ್ಮ ಕುಂಡಿಕೆಯಿಂದ ಪವಿತ್ರ ತೀರ್ಥ ಉಕ್ಕಿ ಹರಿಯಿತು. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಭಕ್ತರು ಪುಣ್ಯ ಸ್ನಾನ ಮಾಡಿದರು.  

ಈ ಸಂದರ್ಭದಲ್ಲಿ ಜಿಲ್ಲಾಡಳಿತದಿಂದ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ತಲಕಾವೇರಿಯಲ್ಲಿ ಭದ್ರತೆಗಾಗಿ 500 ಪೊಲೀಸರನ್ನು ನಿಯೋಜಿಸಲಾಗಿತ್ತು.