ಬೆಂಗಳೂರು(ಸೆ.06): ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಇಂದು ಕಾನೂನು ತಜ್ಞರ ಜೊತೆ ಮಾತುಕತೆ ನಡೆಸಲಿದ್ದಾರೆ.

ಬೆಳಗ್ಗೆ ಕಾನೂನು ತಜ್ಞರ ಜೊತೆ ಮಾತುಕತೆ ನಡೆಸಿ ಸಂಜೆ 6 ಗಂಟೆಗೆ ಉಭಯ ಸದನ ನಾಯಕರ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ರಾಜ್ಯದ ಕೇಂದ್ರ ಸಚಿವರು, ಸಂಸದರು ಭಾಗವಹಿಸಲಿದ್ದಾರೆ. ಇದೇ ವೇಳೆ ಎಲ್ಲ ವಿಚಾರಗಳನ್ನು ಕೋರ್ಟ್​ ಮುಂದೆ ಮಂಡಿಸಿದ್ದೇವೆ. ಆದರೂ ಈ ರೀತಿ ಸುಪ್ರೀಂಕೋರ್ಟ್​ ತೀರ್ಪು ನೀಡಿದೆ. ಮೇಲುಸ್ತುವಾರಿ ಸಮಿತಿ ಮುಂದೆ ಕೂಡ ಮನವಿ ಸಲ್ಲಿಸುತ್ತೇವೆ.

ಇಂದು ಚರ್ಚೆ ನಡೆಸಿ ಕಾನೂನು ಪ್ರಕಾರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಹೇಳಿದ್ದಾರೆ.