ಮೈಸೂರಿಗೆ ಕುಡಿಯುವ ನೀರು ಹರಿಸುವ ಘಟಕಕ್ಕೆ ಬೀಗ. ತಮಿಳ್ನಾಡಿಗೆ ಬಸ್ ಸಂಚಾರ ಸ್ಥಗಿತ

ಬೆಂಗಳೂರು/ಮೈಸೂರು(ಸೆ.06); ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕೆಂಬ ಸುಪ್ರೀಂಕೋರ್ಟ್ ತೀರ್ಪು ಖಂಡಿಸಿ ಹಳೇ ಮೈಸೂರು ಣಾಗದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಮೈಸೂರು ಮಾರ್ಗದಲ್ಲಿ ಬಸ್ ಸಂಚಾರವನ್ನ ತಡೆದಿರುವ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಮನಗರ, ಚನ್ನಪಟ್ಟಣದವರೆಗೆ ಮಾತ್ರ ಬಸ್ ಸಂಚರಿಸುತ್ತಿದ್ದು, ಅಲ್ಲಿಂದ ಮುಂದೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಈ ಮಧ್ಯೆ, ೫೦ ಕ್ಕೂ ಹೆಚ್ಚುಪ್ರತಿಭಟನಾಕಾರರು ಮೈಸೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಮೇಗಳಾಪುರ ಸಮೀಪದ ಪಂಪ್ ಹೌಸ್ ಘಟಕಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಮಂಡ್ಯಕ್ಕೆ ತೆರಳುವ ಕೆಎಸ್ಆರ್ಟಿಸಿ ಬಸ್ ಸಂಚಾತ ಸ್ಥಗಿತಗೊಳಿಸಲಾಗಿದೆ. ಮಂಡ್ಯ, ಶ್ರೀರಂಗಪಟ್ಟಣ, ಕೆಆರ್​ಎಸ್​​, ಮದ್ದೂರು, ಮಳವಳ್ಳಿ ಸೇರಿ ಹಲವೆಡೆ ರೈತರು, ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದೆ. ವಿವಿಧೆಡೆ ರಸ್ತೆ ತಡೆದು, ಟೈರ್​ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇತ್ತ, ಹಾಸನದ ಗೊರೂರು ಜಲಾಶಯಕ್ಕೂ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು. ಇಬ್ಬರು ಡಿವೈಎಸ್ಪಿ. ಇಬ್ಬರು ಸರ್ಕಲ್ ಇನ್ಸ್`ಪೆಕ್ಟರ್‍, 8 ಪಿಎಸ್ಐ ಸೇರಿದಂತೆ ನೂರಕ್ಕೂ ಹೆಚ್ಚು ಸಿಬ್ಬಂದಿಯನ್ನ ನಿಯೋಜಿಸಲಾಗಿದೆ.