ಬಿಜೆಪಿ ಶಾಸಕನಿಂದ ಅತ್ಯಾಚಾರ ನಡೆದಿರುವುದು ದೃಢಪಡಿಸಿದ ಸಿಬಿಐ

First Published 11, May 2018, 11:58 AM IST
CBI confirms rape charge against Unnao MLA Kuldeep Singh Sengar
Highlights

ಉತ್ತರ ಪ್ರದೇಶದ ಉನ್ನಾವೋನಲ್ಲಿ ಬಿಜೆಪಿ ಶಾಸಕರಿಂದ ನಡೆದ ಅತ್ಯಾಚಾರ ಪ್ರಕರಣವನ್ನು ತನಿಖೆ ನಡೆಸಿದ ಸಿಬಿಐ ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ಖಚಿತ ಎಂದು ಹೇಳಿದೆ.

ಲಕ್ನೋ : ಉತ್ತರ ಪ್ರದೇಶದ ಉನ್ನಾವೋನಲ್ಲಿ ಬಿಜೆಪಿ ಶಾಸಕರಿಂದ ನಡೆದ ಅತ್ಯಾಚಾರ ಪ್ರಕರಣವನ್ನು ತನಿಖೆ ನಡೆಸಿದ ಸಿಬಿಐ ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ಖಚಿತ ಎಂದು ಹೇಳಿದೆ.

ಬಿಜೆಪಿ ಶಾಸಕ ಕುಲ್ ದೀಪ್ ಸಿಂಗ್ ಸೇಂಗರ್ ರಿಂದ ಕಳೆದ ವರ್ಷ ಜೂನ್ 4 ರಂದು ಅತ್ಯಾಚಾರ ನಡೆದಿದ್ದು, ಈ ಸಂಬಂಧ ಜೂನ್ 20 ರಂದು ಶಾಸಕರು ಹಾಗೂ ಅವರ ಕೆಲವು ಸಹಚರರ ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿತ್ತು. 

ಈ ಸಂಬಂಧ ಶೇಂಗರ್ ಸಿಂಗ್ ಹಾಗೂ ಅವರ ಸಹಚರರನ್ನು ಕಳೆದ ಏಪ್ರಿಲ್ ನಲ್ಲಿ ಬಂಧನಕ್ಕೆ ಒಳಪಡಿಸಲಾಗಿತ್ತು. ಇದಾದ ಬಳಿಕ ಈ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರವು ಸಿಬಿಐ ವಹಿಸಿತ್ತು.  ಕೇಂದ್ರೀಯ ತನಿಖಾ ತಂಡವು  ಪ್ರಕರಣ ಸಂಬಂಧ ತನಿಖೆ ಆರಂಭ ಮಾಡಿತ್ತು. 

ಅತ್ಯಾಚಾರಕ್ಕೆ ಒಳಗಾದ ಯುವತಿಯ ವೈದ್ಯಕೀಯ ಪರೀಕ್ಷೆ ಹಾಗೂ  ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಬಟ್ಟೆಗಳನ್ನು  ಪರೀಕ್ಷೆಗೆ ಕಳಿಸಲು ಸ್ಥಳೀಯ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು. ಅಲ್ಲದೇ ಶಾಸಕರನ್ನು ರಕ್ಷಿಸಲು ಪೊಲೀಸರು ಯತ್ನಿಸಿದ್ದರು ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.  

ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ,  ಶೇಂಗರ್ ಮೇಲಿನ ಪ್ರಕರಣವನ್ನು ದೃಢಪಡಿಸಿದೆ. 

loader