ಪ್ರಕರಣ ಕುರಿತು ತನಿಖೆ ಚುರುಕುಗೊಳಿಸಿರುವ ಸಿಬಿಐ, ಇವತ್ತು ಇಬ್ಬರು ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಿದೆ. ನಿನ್ನೆಯಿಂದ ತೀವ್ರ ವಿಚಾರಣೆಗೊಳಪಡಿಸಿರುವ ಸಿಬಿಐ ಅಧಿಕಾರಿಗಳು, ಇವತ್ತು ಗಂಗೇನಹಳ್ಳಿಯಲ್ಲಿರುವ ಸಿಬಿಐ ಕಚೇರಿಗೆ ಕರೆತಂದು ನೋಟು ಬದಲಾವಣೆ ಮೂಲದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಬೆಂಗಳುರು (ಡಿ.04): ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಲ್ಲಿ ಸಿಕ್ಕಿಬಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಲೋಕೋಪಯೋಗಿ ಸಚಿವ ಎಚ್. ಸಿ ಮಹದೇವಪ್ಪ ಆಪ್ತ ಅಧಿಕಾರಿಗಳಾದ ಚಿಕ್ಕರಾಯಪ್ಪ ಮತ್ತು ಜಯಚಂದ್ರ ಮೇಲೆ ಸಿಬಿಐ ಹದ್ದಿನ ಕಣ್ಣಿಟ್ಚಿದೆ.

ಪ್ರಕರಣ ಕುರಿತು ತನಿಖೆ ಚುರುಕುಗೊಳಿಸಿರುವ ಸಿಬಿಐ, ಇವತ್ತು ಇಬ್ಬರು ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಿದೆ. ನಿನ್ನೆಯಿಂದ ತೀವ್ರ ವಿಚಾರಣೆಗೊಳಪಡಿಸಿರುವ ಸಿಬಿಐ ಅಧಿಕಾರಿಗಳು, ಇವತ್ತು ಗಂಗೇನಹಳ್ಳಿಯಲ್ಲಿರುವ ಸಿಬಿಐ ಕಚೇರಿಗೆ ಕರೆತಂದು ನೋಟು ಬದಲಾವಣೆ ಮೂಲದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೂಡ ವಿಚಾರಣೆಗೊಳಪಡಿಸಿದ್ದಾರೆ. ಕಾವೇರಿ ನೀರಾವರಿ ನಿಗಮದ ಎಂಡಿ ಚಿಕ್ಕರಾಯಪ್ಪ, ಮತ್ತು ಹೆದ್ದಾರಿ ಪ್ರಾಧಿಕಾರದ ಯೋಜನಾಧಿಕಾರಿಯಾಗಿದ್ದ S.C.ಜಯಚಂದ್ರ ಮನೆಗಳ ಮೇಲೆ ದಾಳಿ ನಡೆಸಿದ್ದಾಗ 152 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿತ್ತು.