ನಟ ಹಾಗೂ ಸಿಸಿಎಲ್‌ ಆಟಗಾರ ವಿಕಲಚೇತನ ಧ್ರುವ ಬಹು ಅಂಗಾಂಗ ವೈಫಲ್ಯದಿಂದ ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಂಗಳೂರು(ಆ.01): ನಟ ಹಾಗೂ ಸಿಸಿಎಲ್‌ ಆಟಗಾರ ವಿಕಲಚೇತನ ಧ್ರುವ ಬಹು ಅಂಗಾಂಗ ವೈಫಲ್ಯದಿಂದ ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಧ್ರುವ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ವಿಕಲಚೇತನ ಪತ್ರಿಭೆಯಾಗಿದ್ದ ಧ್ರುವ, ಸಿಸಿಎಲ್‌ ಮತ್ತು ನಟನೆ ಮೂಲಕ ಗುರುತಿಸಿಕೊಂಡಿದ್ದರು. ನಟ ಧ್ರುವ, ಕಿಚ್ಚ ಸುದೀಪ್ ಅವರ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡದಲ್ಲಿ ಉತ್ತಮ ಆಟಗಾರರಾಗಿದ್ದರು.

2007ರಲ್ಲಿ ತಮ್ಮ 25ನೇ ವರ್ಷ ವಯಸ್ಸಿನಲ್ಲಿ ಸ್ನೇಹಾಂಜಲಿ ಎಂಬ ಚಲನಚಿತ್ರದಲ್ಲಿ ನಾಯಕರಾಗಿ ನಟಿಸಿ ಎಲ್ಲರ ಹುಬ್ಬೇರುವಂತೆ ಮಾಡಿದರು. ಧ್ರುವ್ ಅವರ ಹಠಾತ್ ಸಾವಿಗೆ ಚಿತ್ರರಂಗದ ಅನೇಕ ಗಣ್ಯರು, ಸ್ನೇಹಿತರು ಕಂಬನಿ ಮಿಡಿದಿದ್ದಾರೆ.