Asianet Suvarna News Asianet Suvarna News

ಕಣಿವೆ ಪ್ರಕ್ಷುಬ್ಧ: 40 ಸಾವಿರ ಜನರ ಸ್ಥಳಾಂತರ

ಕಣಿವೆ ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಸೇನೆ ಯುದ್ದ ಸನ್ನದ್ಧ ಸ್ಥಿತಿಗೆ ಸಜ್ಜಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜಮ್ಮುವಿನ ಸಂಬಾ ಮತ್ತು ಕಥುವಾ ಪ್ರದೇಶದಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ ಮುಂದುವರೆಸಿದ್ದು, ಸುಮಾರು 40 ಸಾವಿರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Ceasefire violation by Pakistan in valley

ಜಮ್ಮು (ಮೇ.  23): ಕಣಿವೆ ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಸೇನೆ ಯುದ್ದ ಸನ್ನದ್ಧ ಸ್ಥಿತಿಗೆ ಸಜ್ಜಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜಮ್ಮುವಿನ ಸಂಬಾ ಮತ್ತು ಕಥುವಾ ಪ್ರದೇಶದಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ ಮುಂದುವರೆಸಿದ್ದು, ಸುಮಾರು 40 ಸಾವಿರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.  

ಗಡಿ ಪ್ರದೇಶ ಉದ್ವಿಗ್ನವಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಕೆಲವರಿಗೆ ತಾತ್ಕಾಕಲಿಕ ಶಿಬಿರಗಳಲ್ಲಿ ಪುನರ್ವಸತಿ ಕಲ್ಪಿಸಲಾಗಿದ್ದರೆ ಇನ್ನೂ ಹಲವರು ತಮ್ಮ ಸಂಬಂಧಿಕರ ಮನೆಗಳಲ್ಲಿ ಆಶ್ರಯ ಪಡೆದಿದ್ದಾರೆ ಎನ್ನಲಾಗಿದೆ. 

ಕಳೆದ ಕೆಲವು ದಿನಗಳಿಂದ ಪಾಕಿಸ್ತಾನ ನಿರಂತರವಾಗಿ ಶೆಲ್ ದಾಳಿ ನಡೆಸುತ್ತಿದ್ದು, ಪ್ರಮುಖವಾಗಿ ರಾಮ್ ಘರ್ ಸೆಕ್ಟರ ಬಳಿ ಯುದ್ದ ಸನ್ನದ್ಧ ಸ್ಥಿತಿ ನಿರ್ಮಾಣವಾಗಿದೆ.

Follow Us:
Download App:
  • android
  • ios