ಕೋಲ್ಕತಾ[ಆ.10]: ‘ಯಾವುದೇ ಕಾರಣಕ್ಕೂ ಚುನಾವಣೆಗಳಲ್ಲಿ ಮತ್ತೆ ಬ್ಯಾಲೆಟ್‌ ಪೇಪರ್‌ ಬಳಕೆ ಮಾಡುವ ಹಳೆಯ ವ್ಯವಸ್ಥೆಗೆ ಮರಳುವ ಪ್ರಮೇಯವೇ ಇಲ್ಲ’ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್‌ ಅರೋರಾ ಶುಕ್ರವಾರ ಹೇಳಿದ್ದಾರೆ.

ಪಶ್ವಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬೇಡಿಕೆಯನ್ನು ಸಾರಾಸಗಟಾಗಿ ತಳ್ಳಿ ಹಾಕಿರುವ ಚುನಾವಣಾ ಆಯುಕ್ತರು, ಎಲೆಕ್ಟ್ರಾನಿಕ್‌ ಮತದಾನ ವ್ಯವಸ್ಥೆಯಿಂದ ವಾಪಸ್‌ ಬ್ಯಾಲೆಟ್‌ ಪೇಪರ್‌ ಬಳಕೆ ಮಾಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಈಗಾಗಲೇ ಸುಪ್ರೀಂಕೋರ್ಟ್‌ ಕೂಡ ಈ ಬಗ್ಗೆ ತನ್ನ ಸ್ಪಷ್ಟ ನಿಲುವನ್ನು ಬೇರೆ ಬೇರೆ ಸಂದರ್ಭಗಳಲ್ಲಿ ವ್ಯಕ್ತಪಡಿಸಿದೆ ಎಂದು ಇಲ್ಲಿನ ಸುಭಾಷ್‌ ಚಂದ್ರ ಬೋಸ್‌ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಸ್ಪಷ್ಟಪಡಿಸಿದರು.

ಕಾಶ್ಮೀರ ಚುನಾವಣೆ ವಿಚಾರವಾಗಿ ಪ್ರಶ್ನಿಸಿದ್ದಕ್ಕೆ ‘ಕೇಂದ್ರ ಗೃಹ ಸಚಿವಾಲಯ ಮತ್ತು ಕಾನೂನು ಸಚಿವಾಲಯದ ಜೊತೆ ಸಂಪರ್ಕದಲ್ಲಿದ್ದು, ಅವರ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದರು.