ಸೆಪ್ಟಂಬರ್ 2 ರಂದು ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದ್ದು ಹಣಕಾಸು ಹಾಗೂ ಆರ್ಥಿಕ 2 ಹೊಣೆ ಹೊತ್ತಿರುವ ಅರುಣ್ ಜೇಟ್ಲಿ ಅವರಿಂದ ಪ್ರಧಾನಿ ಮೋದಿ ಅವರು ರಕ್ಷಣಾ ಖಾತೆಯ ಹಿಂಪಡೆಯಲಿದ್ದಾರೆ ಎನ್ನಲಾಗಿದೆ.

ನವದೆಹಲಿ(ಆ.31): ಕೇಂದ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ಕರ್ನಾಟಕದಿಂದ ಕೇಂದ್ರ ಸಚಿವರಾಗಿರುವ ಸಾಂಖ್ಯಿಕ ಮತ್ತು ಅನುಷ್ಟಾನ ಕಾರ್ಯಕ್ರಮ ಸಚಿವರಾದ ಡಿ.ವಿ. ಸದಾನಂದ ಗೌಡ ಅವರಿಗೆ ಸಂಪುಟ ಸಚಿವ ಸ್ಥಾನ ಕೈತಪ್ಪುವ ಸಾಧ್ಯತೆಯಿದೆ.

ಸೆಪ್ಟಂಬರ್ 2 ರಂದು ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದ್ದು ಹಣಕಾಸು ಹಾಗೂ ಆರ್ಥಿಕ 2 ಹೊಣೆ ಹೊತ್ತಿರುವ ಅರುಣ್ ಜೇಟ್ಲಿ ಅವರಿಂದ ಪ್ರಧಾನಿ ಮೋದಿ ಅವರು ರಕ್ಷಣಾ ಖಾತೆಯ ಹಿಂಪಡೆಯಲಿದ್ದಾರೆ ಎನ್ನಲಾಗಿದೆ. ಹಾಲಿ ಸಚಿವರಲ್ಲಿ 9 ಮಂದಿಗೆ ಕೋಕ್ ನೀಡುವ ಸಂಭವಗಳಿದ್ದು, 7 ಮಂದಿ ಹೊಸಬರಿಗೆ ಅವಕಾಶ ನೀಡಲಾಗುತ್ತದೆ.