ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ತೀವ್ರ ಕಳವಳಗೊಂಡಿರುವ ಕೇಂದ್ರ ಸರ್ಕಾರ, ಅವೆರಡೂ ಇಂಧನಗಳ ಬೆಲೆಯನ್ನು ಇಳಿಕೆ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. 

ನವದೆಹಲಿ (ಜೂ. 01): ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ತೀವ್ರ ಕಳವಳಗೊಂಡಿರುವ ಕೇಂದ್ರ ಸರ್ಕಾರ, ಅವೆರಡೂ ಇಂಧನಗಳ ಬೆಲೆಯನ್ನು ಇಳಿಕೆ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ.

ಪೆಟ್ರೋಲ್‌, ಡೀಸೆಲ್‌ ಮೇಲೆ ವಿಧಿಸಲಾಗುತ್ತಿರುವ ಮೌಲ್ಯವರ್ಧಿತ ತೆರಿಗೆ (ವ್ಯಾಟ್‌) ಕಡಿತಗೊಳಿಸುವಂತೆ ರಾಜ್ಯ ಸರ್ಕಾರಗಳ ಮನವೊಲಿಸುವಲ್ಲಿ ಯಶಸ್ವಿಯಾದರೆ, ತೈಲೋತ್ಪನ್ನ ಕಂಪನಿಗಳ ಮಾರಾಟ ಕಮಿಷನ್‌ ಇಳಿಕೆ ಮಾಡಿಸುವಲ್ಲಿ ಸಫಲವಾದರೆ, ಅಬಕಾರಿ ಸುಂಕವನ್ನು ಕೊಂಚ ಇಳಿಕೆ ಮಾಡಿ ಲೀಟರ್‌ ಪೆಟ್ರೋಲ್‌- ಡೀಸೆಲ್‌ ಬೆಲೆಯನ್ನು 4ರಿಂದ 5 ರು.ನಷ್ಟುಇಳಿಕೆ ಮಾಡುವ ಆಸೆ ಕೇಂದ್ರ ಸರ್ಕಾರಕ್ಕೆ ಇದೆ. ಆದರೆ ಈ ಪ್ರಸ್ತಾವಕ್ಕೆ ರಾಜ್ಯ ಸರ್ಕಾರಗಳು ಒಪ್ಪುತ್ತವೆಯೇ ಎಂಬುದರ ಮೇಲೆ ಇದರ ಭವಿಷ್ಯ ಅಡಗಿದೆ.

ತೈಲ ಬೆಲೆ ಏರಿಕೆ ಕೇಂದ್ರ ಸರ್ಕಾರಕ್ಕೆ ತೀವ್ರ ಚಿಂತೆಯ ವಿಷಯವಾಗಿದೆ. ರಾಜ್ಯಗಳು ಹಾಗೂ ತೈಲ ಕಂಪನಿಗಳು ತಮ್ಮ ಪಾತ್ರ ನಿರ್ವಹಿಸಿದರೆ ಶೀಘ್ರದಲ್ಲೇ ಬೆಲೆ ಇಳಿಕೆಯಾಗಬಹುದು. ಏಕೆಂದರೆ, ಕೇಂದ್ರ ಸರ್ಕಾರವೊಂದೇ ಹೊರೆ ಹೊರಲು ಆಗದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.