Asianet Suvarna News Asianet Suvarna News

ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಆದೇಶ ಮಾರ್ಪಾಡು ಕೋರಿ ಕೇಂದ್ರದಿಂದ ಸುಪ್ರೀಂ ಕೋರ್ಟ್'ಗೆ ಅರ್ಜಿ

Central Govt Came For The Help Of Karnataka
  • Facebook
  • Twitter
  • Whatsapp

ನವದೆಹಲಿ(ಅ.03): ಕೊನೆಗೂ ಕರ್ನಾಟಕದ ನೆರವಿಗೆ ಕೇಂದ್ರ ಸರ್ಕಾರ ಆಗಮಿಸಿದೆ. ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​'ನಲ್ಲಿ ಕೇಂದ್ರ ಸರ್ಕಾರ ಅಫಿಡವಿಟ್​ ಸಲ್ಲಿಸಿದೆ.

ಮಂಡಳಿ ರಚನೆ ಆದೇಶ ಮಾರ್ಪಾಡು ಕೋರಿ ಕೇಂದ್ರದಿಂದ ಸುಪ್ರೀಂ ಕೋರ್ಟ್'ಗೆ ಅರ್ಜಿ ಸಲ್ಲಿಸಿದ್ದು, ಮಂಡಳಿ ರಚಿಸುವಂತೆ ಆದೇಶಿಸುವ ಅಧಿಕಾರ ಸುಪ್ರೀಂಕೋರ್ಟ್​ಗೆ ಇಲ್ಲ ಬದಲಾಗಿ ಈ ಅಧಿಕಾರ ಕೇವಲ ಸಂಸತ್ತಿಗೆ ಮಾತ್ರ ಇದೆ ಎಂದು ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದಾರೆ.

ಕೇಂದ್ರದ ಮಾರ್ಪಾಡು ಅರ್ಜಿ ವಿಚಾರಣೆಗೆ ಅಂಗೀಕರಿಸಿದ ಸುಪ್ರೀಂಕೋರ್ಟ್ ನಾಳೆ ಮಧ್ಯಾಹ್ನ 2 ಗಂಟೆಗೆ ಅರ್ಜಿ ವಿಚಾರಣೆ ನಡೆಸಲಿದೆ. ಆದರೆ, ಕೇಂದ್ರ ಸರ್ಕಾರದ ಸಲ್ಲಿಸಿರುವ ಈ ಅರ್ಜಿ ವಿಚಾರಣೆಗೆ ತಮಿಳುನಾಡು ತೀವ್ರ ವಿರೋಧ ವ್ಯಕ್ತಪಡಿಸಿದೆ.

 

Follow Us:
Download App:
  • android
  • ios